Oneindia Mobile
New Videos here on ur Mozilla -Get them!
ಮೈಸೂರಲ್ಲಿ ಕನಕ ಜಯಂತಿ ಆಚರಣೆ ವಿವರ
ಬುಧವಾರ, ನವೆಂಬರ್ 4, 2009, 14:08 [IST]

Kanakadasa
ಮೈಸೂರು, ನ. 4: ಮೈಸೂರು ಜಿಲ್ಲಾಡಳಿತವು ಸಂತ ಕನಕ ಜಯಂತ್ಯೋತ್ಸವ ಸಮಿತಿಯೊಂದಿಗೆ ನವೆಂಬರ್ 5ರಂದು ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಬಿ.ವಿ. ಕಾರಂತ ರಂಗಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸುತ್ತಿದೆ.

ಕಾಗಿನೆಲೆ ಮಹಾಸಂಸ್ಥಾನದ ಕನಕಗುರು ಪೀಠದಶಿವಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಕನಕದಾಸರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು. ಸಮಾರಂಭದ ಅಧ್ಯಕ್ಷತೆಯನ್ನು ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಎಸ್.ಎ. ರಾಮದಾಸ್ ಅವರು ವಹಿಸಲಿದ್ದಾರೆ. ಕರ್ನಾಟಕ ಜಾನಪದ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ: ಕಾಲೇಗೌಡ ನಾಗವಾರ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು.

ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಎಂ.ಎನ್. ನವೀನ ಮತ್ತು ತಂಡದವರಿಂದ ಸಾಂಸ್ಕೃತಿಕ ಕಾರ್ಯಕ್ರಮ "ಕನಕ ಸಂಗೀತ ಸುಧೆ" ಏರ್ಪಡಿಸಲಾಗಿದೆ.
ದಿನಾಂಕ 6.11.09 ರಿಂದ 10.11.09 ರವರೆಗೆ ಜಗನ್ಮೋಹನ ಅರಮನೆಯಲ್ಲಿ ಪ್ರತಿದಿನ ಸಂಜೆ ಸಂತ ಶ್ರೀ ಕನಕ ಜಯಂತ್ಯೋತ್ಸವ ಸಮಿತಿ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)



»Home »News  »Entertainment  »Currency  »Free Classifieds  »Cricket  »TV Schedules  »In Theatres  »Weather  »Languages  »Horoscope 

© Greynium Information Technologies Pvt. Ltd.